ಅಪಘಾತ ದೃಶ್ಯ
ಹೊಸಕೋಟೆ: ಹೊಸಕೋಟೆ-ಡಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ ಸತ್ಯವಾರ ಗ್ರಾಮದ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಆರ್.ವಿ. ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಹಾಗೂ ಒಬ್ಬ ಬೈಕ್ ಸವಾರ ಮೃತಪಟ್ಟಿದ್ದಾರೆ.
ಶುಕ್ರವಾರ ಮುಂಜಾನೆ 4.30ರ ಹೊತ್ತಿಗೆ ಅಪಘಾತ ನಡೆದಿದೆ. ಹೊಸಕೋಟೆ ಕಡೆಯಿಂದ ದೇವನಹಳ್ಳಿಗೆ ಎಕ್ಸ್ ಯುವಿ 700 ಕಾರು ಅತಿ ವೇಗದಿಂದ ಹೋಗುತ್ತಿತ್ತು. ಈ ವೇಳೆ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಅಲ್ಲಿಂದ ಮುಂದೆ ಇದ್ದ ಕ್ಯಾಂಟರ್‌ಗೂ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳು, ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಟ್ಟ ಮಂಜು ಕವಿದ ಕಾರಣ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತಪಟ್ಟರವರ ಹೆಸರು, ವಿಳಾಸದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.