ಹೊಸಕೋಟೆ: ನಗರದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಕೃತಿ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾದ ಹರಳೂರು ರಾಜಣ್ಣ ಮಾತನಾಡಿ, ಇತ್ತೀಚೆಗೆ ಕುಟುಂಬದಲ್ಲಿ ಸಣ್ಣಪುಟ್ಟ ವೈಮನಸ್ಸುಗಳಿಂದ ವಿಚ್ಚೇದನ ಮಟ್ಟಕ್ಕೆ ತೆರಳುತಿದೆ. ಕುಟುಂಬದ ಸದಸ್ಯರು ಮತ್ತು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತಿದೆ. ಹೆಣ್ಣು ಸಹನೆಯಿಂದ ಇದ್ದರೆ ಬದುಕು ಹಸನಾಗುತ್ತದೆ ಎಂದರು.
ನಗರಸಭೆ ಅಧ್ಯಕ್ಷೆ ಆಶಾ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಕುರುಬರಹಳ್ಳಿ ವೆಂಕಟೇಶ್, ತಾಲ್ಲೂಕು ಯೋಜನಾಧಿಕಾರಿ ಹರೀಶ್ ಕುಮಾರ್, ತಾಲ್ಲೂಕು ಸಮನ್ವಯಾಧಿಕಾರಿ ವಸಂತ, ವಲಯ ಮೇಲ್ವಿಚಾರಕ ಶಬರೀಶ್, ಜಿಲ್ಲಾ ಜನಜಾಗೃತಿ ವೇದಿಕೆಯ ಮಂಜುಳ, ಮಮತ, ಉದಯಚಂದ್ರ ಒಕ್ಕೂಟದ ಅಧ್ಯಕ್ಷ ಮಂಜುನಾಥ, ಪ್ರಾದೇಶಿಕ ಸಮನ್ವಯಾಧಿಕಾರಿ ಸಂಗೀತ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.