ADVERTISEMENT

HOSOKOTE: ಹಸಿಗಾಳ ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ಸವಲತ್ತು

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 2:48 IST
Last Updated 1 ಜನವರಿ 2026, 2:48 IST
ಹೊಸಕೋಟೆ ತಾಲ್ಲೂಕಿನ ಹಸಿಗಾಳದಲ್ಲಿ ಫಲನುಭವಿಗಳಿಗೆ ಕಿಟ್ ವಿತರಿಸಿದ ಶಾಸಕ ಶರತ್‌ ಬಚ್ಚೇಗೌಡ
ಹೊಸಕೋಟೆ ತಾಲ್ಲೂಕಿನ ಹಸಿಗಾಳದಲ್ಲಿ ಫಲನುಭವಿಗಳಿಗೆ ಕಿಟ್ ವಿತರಿಸಿದ ಶಾಸಕ ಶರತ್‌ ಬಚ್ಚೇಗೌಡ   

ಹೊಸಕೋಟೆ: ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬರುತ್ತಿದೆ. ಸ್ಥಳೀಯ ಮಟ್ಟದಲ್ಲಿ ಅರ್ಹ ಪಲಾನುಭವಿ ಗುರುತಿಸಿ, ಅವರಿಗೆ ತಲುಪಿಸಲು ಅಧಿಕಾರಿಗಳು ಪ್ರಮಾಣಿಕವಾಗಿ ಕೆಲಸ ಮಾಡಬೇಕೆಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಕೊಂಡಹಳ್ಳಿ ಗ್ರಾ.ಪಂ ವ್ಯಾಪ್ತಿಯ ಹಸಿಗಾಳ ಗ್ರಾಮದಲ್ಲಿ ಬಮುಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಹೈ ಮಾಸ್ಟ್ ದೀಪ ಉದ್ಘಾಟನೆ ಹಾಗೂ ಗ್ರಾ.ಪಂ ಶೇ25ರ ಅನುದಾನದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿ ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿಗಳ ಶ್ರಮ ಸಾಕಷ್ಟಿದೆ. ಅದಕ್ಕೆ ಪೂರಕವಾಗಿ ಗ್ರಾ.ಪಂ ಸದಸ್ಯರು ಮತ್ತು ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.

ADVERTISEMENT

ಬಮುಲ್ ನಿರ್ದೇಶಕ ಬಿವಿ.ಸತೀಶ್‌ಗೌಡ ಮಾತನಾಡಿ, ಬಮುಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿ ಹೈಮಾಸ್ಟ್ ದೀಪವನ್ನು ಅಳವಡಿಸಲಾಗಿದೆ. ಬಮುಲ್ ಕ್ಷೀರ ಕ್ಷೇತ್ರದ ಕ್ರಾಂತಿ ಜೊತೆಗೆ ಸಾಮಾಜಿಕ ಕಾರ್ಯಗಳನ್ನು ಸಹ ನಿರಂತವಾಗಿ ಮಾಡುತ್ತಿದೆ ಎಂದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೃಷ್ಣಮೂರ್ತಿ, ವೆಂಕಟೇಶ್, ಗ್ರಾ.ಪಂ ಅಧ್ಯಕ್ಷೆ ಪದ್ಮಾವತಿ ಮಂಜುನಾಥ್, ಉಪಾಧ್ಯಕ್ಷೆ ಪಾರ್ವತಮ್ಮ ಮುನಿಶಾಮಣ್ಣ, ಗ್ರಾ.ಪಂ ಸದಸ್ಯರಾದ ರಾಧಾಕೃಷ್ಣ, ಮುನಿನಂಜೇಗೌಡ, ಭೈರೇಗೌಡ, ಲಕ್ಷ್ಮಣ್‌, ಎಂಪಿಸಿಎಸ್ ಅಧ್ಯಕ್ಷ ನಾರಾಯಣಸ್ವಾಮಿ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಪಿಳ್ಳೆಗೌಡ, ಬಿಜಿ.ನಾರಾಯಣಗೌಡ, ಸೋಮಶೇಖರ್, ಲಾರಿ ಕೃಷ್ಣಪ್ಪ, ಹಸಿಗಾಳ ಜಗದೀಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.