ADVERTISEMENT

ಹೊಸಕೋಟೆ | ತಾವರೆಕೆರೆ: ಅದ್ದೂರಿ ಬಸವೇಶ್ವರ ಜಯಂತಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 16:14 IST
Last Updated 22 ಜೂನ್ 2025, 16:14 IST
ಹೊಸಕೋಟೆ ತಾಲ್ಲೂಕಿನ ತಾವರೆಕೆರ ಗ್ರಾಮದಲ್ಲಿ ನಡೆದ ಬಸವೇಶ್ವರ ಜಯಂತಿ ಮೆರವಣಿಗೆಯಲ್ಲಿ ವೀರಗಾಸೆ ನೃತ್ಯ
ಹೊಸಕೋಟೆ ತಾಲ್ಲೂಕಿನ ತಾವರೆಕೆರ ಗ್ರಾಮದಲ್ಲಿ ನಡೆದ ಬಸವೇಶ್ವರ ಜಯಂತಿ ಮೆರವಣಿಗೆಯಲ್ಲಿ ವೀರಗಾಸೆ ನೃತ್ಯ   

ಹೊಸಕೋಟೆ: ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಸವೇಶ್ವರ ಜಯಂತಿ ಅದ್ದೂರಿಯಾಗಿ ನಡೆಯಿತು.

ಶನಿವಾರ ಬೆಳಗ್ಗೆ ಬಸವೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಮಂಗಳಾರತಿ ಪ್ರಸಾದ ವಿನಿಯೋಗದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವೀರಗಾಸೆ ಕಲಾತಂಡದಿಂದ ಹಾಗೂ ವಿಶೇಷ ವಾದ್ಯ ವೃಂದದೊಂದಿಗೆ ಅದ್ದೂರಿ ಪಲ್ಲಕ್ಕಿಯಲ್ಲಿ ಬಸವೇಶ್ವರ ಸ್ವಾಮಿಯ ಮೆರವಣಿಗೆ ನಡೆಸಲಾಯಿತು.

ADVERTISEMENT

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜಯಪುರ ಬಸವಕಲ್ಯಾಣ ಮಠದ ಮಹದೇವ ಸ್ವಾಮೀಜಿ, ಗ್ರಾಮದಲ್ಲಿ ಇರುವ ವೀರಶೈವ ಲಿಂಗಾಯಿತ ಬಂಧುಗಳು ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಕ್ರಮವನ್ನು ನಡೆಸಿ ಯಶಸ್ವಿಯಾಗಿ ನೆರವೇರಿಸಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.