ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅ.6 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಸ್ವಯಂ ಉದ್ಯೋಗಿಯಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಶಿಬಿರದಲ್ಲಿ ಭಾಗವಹಿಸಬಹುದು.
ಶಿಬಿರದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯವನ್ನು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತರು ಸೆ.30ರ ಬೆಳಗ್ಗೆ 9ಕ್ಕೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಮೊ.8970476050, 9591514154, 9686248369.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.