ಹೊಸಕೋಟೆ: ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಿದೆ.
ಕ್ರೀಡಾಕೂಟದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಕೀಲರ ತಂಡಗಳು ಸೇರಿ ಒಟ್ಟು 17 ತಂಡಗಳು ಭಾಗವಹಿಸಿವೆ.
ಪಂದ್ಯಾವಳಿಗೆ ಚಾಲನೆ ನೀಡಿದ ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ರಮೇಶ್, ಸದಾಕಾಲ ಒತ್ತಡದ ಕೆಲಸಗಳಲ್ಲಿ ತೊಡಗಿಕೊಂಡಿರುವವರು ದೈಹಿಕ ಆರೋಗ್ಯದತ್ತಲೂ ಹೆಚ್ಚಿನ ಗಮನ ನೀಡಬೇಕು. ಏಕೆಂದರೆ ದೈಹಿಕ ಆರೋಗ್ಯವೂ ಮಾನಸಿಕ ಆರೋಗ್ಯದಷ್ಟೇ ಮುಖ್ಯ ಎಂದರು.
ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಹಾಗೂ ಸ್ನೇಹ ಬಾಂಧವ್ಯ ವೃದ್ಧಿಸಲಿದೆ ಎಂದ ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಅರುಣ್ ಕುಮಾರ್, ಸಹಾಯಕ ಸರ್ಕಾರಿ ಅಭಿಯೋಜಕರು ಎಂ.ನಿರ್ಮಲ ಕುಮಾರಿ, ಪ್ರಸನ್ನ ಕುಮಾರ್, ಹಿರಿಯ ವಕೀಲರಾದ ಹರೀಂದ್ರ, ವೆಂಕಟಸ್ವಾಮಿ, ಪ್ರಸಾದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.