ADVERTISEMENT

ವಸ್ತ್ರ ಚಿತ್ರಕಲಾ ತರಬೇತಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2024, 16:18 IST
Last Updated 12 ಫೆಬ್ರುವರಿ 2024, 16:18 IST

ಹೊಸಕೋಟೆ: ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಉಚಿತ ಎಂಬ್ರಾಯಡರಿ ವಸ್ತ್ರ ಚಿತ್ರಕಲಾ ಉದ್ಯಮ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟು 45 ವರ್ಷದೊಳಗಿನ ಯುವತಿಯರು/ಮಹಿಳೆಯರು ಫೆ16 ರಂದು ಶುಕ್ರವಾರ ನೆಡೆಯುವ ನೇರ ಸಂದರ್ಶನದಲ್ಲಿ ಹಾಜರಾಗಲು ಕೋರಿದೆ.

ಗ್ರಾಮೀಣ ಭಾಗದ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. 35 ಜನರಿಗೆ ಮಾತ್ರ ಅವಕಾಶವಿದ್ದು ಉಚಿತ ಊಟ, ವಸತಿ ವ್ಯವಸ್ಥೆ ಇದ್ದು ಹೆಚ್ಚಿನ ಮಾಹಿತಿಗಾಗಿ ಮೊ. 9505894247/9535774621 ಸಂಪರ್ಕಿಸಲು ಸಂಸ್ಥೆಯ ನಿರ್ದೇಶಕ ಅಂಬರೀಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.