ADVERTISEMENT

‘ಭಾಷೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ’

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2018, 19:13 IST
Last Updated 1 ನವೆಂಬರ್ 2018, 19:13 IST
ಶಾಸಕ ಎನ್.ನಾಗರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಶಾಸಕ ಎನ್.ನಾಗರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಹೊಸಕೋಟೆ: ಶಾಸಕ ಎನ್.ನಾಗರಾಜು ದೀಪ ಬೆಳಗಿಸುವುದರ ಮೂಲಕ ತಾಲ್ಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಪ್ರತಿ ಕನ್ನಡಿಗರೂ ನಮ್ಮ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ಮಾಡಬೇಕಿದೆ. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಮಾತೃಭಾಷೆಯನ್ನು ಕಲಿಸಬೇಕು’ ಎಂದರು.

‘ರಾಜ್ಯದಲ್ಲಿ ನೆಲೆಸಿರುವ ಅನ್ಯ ಭಾಷಿಕರು ಕನ್ನಡದಲ್ಲೇ ಮಾತನಾಡುವಂತೆ ಆಗಬೇಕು’ ಎಂದು ಅವರು ಸಲಹೆ ನೀಡಿದರು.

ADVERTISEMENT

ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಈ ಬಾರಿ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು. ಇತಿಹಾಸ ಪುರುಷರ ವೇಷ ತೊಟ್ಟ ಎಸ್.ಬಿ.ಶಾಲೆಯ ವಿದ್ಯಾರ್ಥಿಗಳು ಗಮನ ಸೆಳೆದರು.

ತಹಶೀಲ್ದಾರ್ ರಮೇಶ್, ನಗರಸಭೆ ಅಧ್ಯಕ್ಷ ಎನ್.ಟಿ. ಹೇಮಂತ್‌ಕುಮಾರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.