ADVERTISEMENT

ಆನೇಕಲ್: ಹಾಸ್ಟೆಲ್‌ ವಿದ್ಯಾರ್ಥಿ ಮೇಲೆ ಸಹಪಾಠಿಗಳ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 23:03 IST
Last Updated 10 ಸೆಪ್ಟೆಂಬರ್ 2025, 23:03 IST
   

ಆನೇಕಲ್: ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಲಯಕ್ಕೆ ಹೊಸದಾಗಿ ಸೇರಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.

ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್‌ ನಡೆಸಿದ ಬಗ್ಗೆ ಹೊಸ ವಿದ್ಯಾರ್ಥಿ ವಾರ್ಡನ್‌ ಮತ್ತು ಪ್ರಾಂಶುಪಾಲರಿಗೆ ದೂರು ನೀಡಿದ್ದ. ಇದರಿಂದ ಸಿಟ್ಟಾದ ಆರು ವಿದ್ಯಾರ್ಥಿಗಳು ಆತನ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ. ವಿವಸ್ತ್ರಗೊಳಿಸಿ ನೃತ್ಯ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.  

ಎರಡು ದಿನಗಳ ಹಿಂದೆ ನಡೆದಿರುವ ಈ ಘಟನೆ ಕುರಿತು ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿ ಮತ್ತು ಆತನ ತಂದೆ ಬುಧವಾರ ಬನ್ನೇರುಘಟ್ಟ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಪಟ್ಟ ಐವರು ಬಾಲಕರು ಮತ್ತು ಶಾಲೆಯ ಪ್ರಾಚಾರ್ಯ, ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಐವರು ಬಾಲಕರನ್ನು ಬಾಲಮಂದಿರಕ್ಕೆ ಕಳಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.