
ದೊಡ್ಡಬಳ್ಳಾಪುರ: ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ಚೌಡೇಶ್ವರಿ ದೇವಸ್ಥಾನದಲ್ಲಿ ಎರಡನೇ ಬಾರಿಗೆ ಕಳ್ಳತನ ನಡೆದಿದೆ. ಭಾನುವಾರ ರಾತ್ರಿ 10ಕ್ಕೆ ದೇವಾಲಯದ ಹಾರೆ ಕೋಲಿನಿಂದ ಬೀಗ ಒಡೆದ ಕಳ್ಳ ಕಾಣಿಕೆ ಹುಂಡಿ ಒಡೆದು ಸುಮಾರು ₹50 ಸಾವಿರ ನಗದು ಮತ್ತು ಕಾಣಿಕೆ ದೋಚಿ ಪರಾರಿಯಾಗಿದ್ದಾನೆ.
ಕಳ್ಳತನದ ಬಳಿಕ ಪಕ್ಕದ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳಿ ಮಾಲಾಧಾರಿಗಳು ನೀಡಿದ ಪ್ರಸಾದ ಸೇವಿಸಿದ್ದಾನೆ. ತೂಬಗೆರೆ ನಿವಾಸಿ ಎಂದು ಹೇಳಿದ್ದ ಎಂದು ಮಾಲಾಧಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಚೌಡೇಶ್ವರಿ ದೇವಸ್ಥಾನಕ್ಕೆ ಗ್ರಾಮಸ್ಥರು ತೆರಳಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳತನದ ದೃಶ್ಯಾವಳಿ ದೇವಾಲಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.