
ದೇವನಹಳ್ಳಿ: ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಪ್ರಧಾನ ಗುರಿಯಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.
ಅನ್ನಭಾಗ್ಯ ಯೋಜನೆ ಅಡಿ ಜುಲೈ–2023ರಿಂದ ಆದ್ಯತಾ ಹಾಗೂ ಅಂತೋದ್ಯಯ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿಯಾಗಿ ಪಟ್ಟಣದ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಫೆಬ್ರವರಿ ಅಥವಾ ಮಾರ್ಚ್ ತಿಂಗಳಿಂದ ಪೌಷ್ಟಿಕಾಂಶಯುಕ್ತ ಇಂದಿರಾ ಆಹಾರ ಕಿಟ್ ವಿತರಣೆ ಆರಂಭಿಸುತ್ತೇವೆ. 5 ಕೆ.ಜಿ ಅಕ್ಕಿಯೊಂದಿಗೆ ಅಗತ್ಯ ಆಹಾರ ಸಾಮಗ್ರಿ ಒಳಗೊಂಡ ಇಂದಿರಾ ಆಹಾರ ಕಿಟ್ ಯೋಜನೆಗೆ ವಾರ್ಷಿಕ ₹6,420 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.
ರಾಷ್ಟ್ರ ಪ್ರಶಸ್ತಿ ವಿಜೇತ ಆರ್. ನಾರಾಯಣಸ್ವಾಮಿ ಹಾಗೂ ಅಂಗಾಂಗ ದಾನ ಮಾಡಿದ ಕುಟುಂಬಗಳನ್ನು ಗೌರವಿಸಲಾಯಿತು.
ಸಂಸದ ಡಾ. ಕೆ. ಸುಧಾಕರ್, ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್. ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಎಂ.ವಿ. ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.