
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ
ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥೈಲ್ಯಾಂಡ್‌ನ ಪುಕೆಟ್ ನಗರದಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಡಿಆರ್‌ಐ ಹಾಗೂ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಫೆಬ್ರವರಿ 4ರ ತಡರಾತ್ರಿ ಆರೋಪಿಗಳು ತಂದಿದ್ದ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 3.03 ಕೆ.ಜಿ ಹೈಡ್ರೊ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿಗೊಂಡ ಮಾದಕ ವಸ್ತುವಿನ ಮೌಲ್ಯವು ಸುಮಾರು ₹1.06 ಕೋಟಿ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಇವರ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.