
ಪ್ರಜಾವಾಣಿ ವಾರ್ತೆ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಆಗಮಿಸಿದ ವಿದೇಶಿ ಪ್ರಯಾಣಿಕ ಬಳಿ ಜನವರಿ 31ರ ರಾತ್ರಿ 2 ಕೆ.ಜಿ. ಹೈಡ್ರೋ ಗಾಂಜಾ ಪತ್ತೆಯಾಗಿದೆ.
ಕಸ್ಟಮ್ಸ್ ಹಾಗೂ ವೈಮಾನಿಕ ಗುಪ್ತಚರ ದಳದ ಸಿಬ್ಬಂದಿ ವಿದೇಶಿ ಪ್ರಯಾಣಿಕರ ಮೇಲೆ ತೀವ್ರ ತಪಾಸಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯಿಂದ ಜಪ್ತಿ ಮಾಡಿರುವ ಗಾಂಜಾದ ಮೌಲ್ಯವು ಸುಮಾರು ₹70 ಲಕ್ಷ ಎಂದು ಅಂದಾಜಿಸಲಾಗಿದೆ.
ಮಾದಕ ವಸ್ತುಗಳ ನಿಯಂತ್ರಣ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.