
ಪ್ರಜಾವಾಣಿ ವಾರ್ತೆ
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.38 ಕೆ.ಜಿ ಹೈಡ್ರೋಪೊನಿಕ್ ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬ್ಯಾಂಕಾಕ್‌ನಿಂದ ಆಗಮಿಸುವ ವಿಮಾನಗಳಲ್ಲಿ ಮಾದಕವಸ್ತು ಹಾಗೂ ಅಪರೂಪದ ವನ್ಯಜೀವಿಗಳ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈಮಾನಿಕ ಗುಪ್ತಚರ ದಳ ಹಾಗೂ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾಗ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ಬಂಧಿತರಿಂದ ಜಪ್ತಿಯಾದ ಗಾಂಜಾದ ಮೌಲ್ಯವನ್ನುಸುಮಾರು ₹2.23 ಕೋಟಿ ಎಂದು ಅಂದಾಜಿಸಲಾಗಿದೆ. ಮಾದಕ ದ್ರವ್ಯಗಳ ನಿಯಂತ್ರಣ ಕಾಯಿದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.