
ಪ್ರಜಾವಾಣಿ ವಾರ್ತೆ
ಬಂಧನ
ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಇಬ್ಬರು ಪ್ರಯಾಣಿಕರಿಂದ ಹೈಡ್ರೊಫೋನಿಕ್ ಗಾಂಜಾವನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ರಾತ್ರಿ ಜಪ್ತಿ ಮಾಡಿದ್ದಾರೆ.
ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ (ಎನ್‌ಡಿಪಿಎಸ್) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಹಾರ ಪೊಟ್ಟಣಗಳಲ್ಲಿ ಗಾಂಜಾ ಕಳ್ಳ ಸಾಗಣೆ ಮಾಡಲಾಗಿದ್ದು, ತಪಾಸಣೆ ವೇಳೆ ಇಬ್ಬರು ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ. ಅವರ ಬಳಿ ಇದ್ದ ₹66.5 ಲಕ್ಷ ಹೈಡ್ರೊಫೋನಿಕ್ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.