ADVERTISEMENT

ಚಂದಾಪುರ ರೈಲ್ವೆ ಸೇತುವೆ ಸಮೀಪ ಪೊಲೀಸರು ಗಸ್ತು ಹೆಚ್ಚಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 2:38 IST
Last Updated 15 ಅಕ್ಟೋಬರ್ 2025, 2:38 IST
ಶಾರದ ವರದರಾಜು
ಶಾರದ ವರದರಾಜು   

ಆನೇಕಲ್: ತಾಲ್ಲೂಕಿನ ಚಂದಾಪುರ ರೈಲ್ವೆ ಸೇತುವೆ ಸಮೀಪದ ಜಾಗ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಪೊಲೀಸರು ಸಂಜೆ ಸಮಯದಲ್ಲಿ ಗಸ್ತು ಹೆಚ್ಚಿಸಬೇಕೆಂದು ಪುರಸಭೆ ಅಧ್ಯಕ್ಷೆ ಶಾರದ ವರದರಾಜು ಒತ್ತಾಯಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಚಂದಾಪುರ ತಾಲ್ಲೂಕಿನ ಹೃದಯಭಾಗದಲ್ಲಿದೆ. ರೈಲ್ವೆ ಸೇತುವೆ ಸಮೀಪ ಕಳೆದ ಕೆಲವು ದಿನಗಳಿಂದ ಓಡಾಡುವುದೇ ಕಷ್ಟವಾಗಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ರೈಲ್ವೆ ಸೇತುವೆ ಬಳಿ ಸಿಸಿಟಿಟಿ ಕ್ಯಾಮೆರಾ ಅಳವಡಿಸಬೇಕಾಗಿದೆ. ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂರ್ಯಸಿಟಿ ಪೊಲೀಸರು ಗಸ್ತು ಹೆಚ್ಚಿಸಬೇಕು. ಈ ಭಾಗದಲ್ಲಿ ಶಾಲಾ–ಕಾಲೇಜುಗಳಿವೆ. ಪ್ರತಿದಿನ ನೂರಾರು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಪೊಲೀಸರು ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT