ADVERTISEMENT

ಅನುಮತಿ ಇಲ್ಲದೆ ಮನೆ ನಿರ್ಮಾಣ: ತೆರವಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 2:33 IST
Last Updated 12 ಸೆಪ್ಟೆಂಬರ್ 2020, 2:33 IST

ಬೆಂಗಳೂರು: ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಅನುಮತಿ ಇಲ್ಲದೆ ಕಟ್ಟಿರುವ ಮನೆಗಳ ತೆರವಿಗೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

‘ಯಾವುದೇ ಪ್ರಾಧಿಕಾರದ ಅನುಮತಿ ಇಲ್ಲದೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. ಇದನ್ನು ತಡೆದು, ಮನೆ ನಿರ್ಮಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಸಂಬಂಧ ಭೂ ಸಂರಕ್ಷಣಾ ಸದನ ಸಮಿತಿಯಲ್ಲೂ ಚರ್ಚೆಯಾಗಿದೆ. ಹೀಗಾಗಿ ತೆರವಿಗೆ ಕ್ರಮ ಕೈಗೊಳ್ಳಲು ತಹಶೀಲ್ದಾರ್‌ಗಳಿಗೆ ಅಧಿಕಾರ ನೀಡಲಾಗಿದೆ’ ಎಂದು ಗ್ರಾಮಾಂತರ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT