ದೊಡ್ಡಬಳ್ಳಾಪುರ ನ್ಯಾಯಾಲಯದ ಆವರಣದಲ್ಡಿ ಅಡ್ಡಾದಿಡ್ಡಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದರು
ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯ ಆವರಣ ಹಾಗೂ ಪ್ರವೇಶದ್ವಾರದಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಗ್ರಾಮಾಂತರ ಪೊಲೀಸರು ಮಾಡಿ ವಾಹನ ಮಾಲೀಕರಿಗೆ ದಂಡ ವಿಧಿಸಿದರು.
ನ್ಯಾಯಾಲಯ ಆವರಣದಲ್ಲಿ ಎಲ್ಲಂದರಲ್ಲಿ ಬೈಕ್ ನಿಲುಗಡೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಯಾಧೀಶರು ನೀಡಿದ ಸೂಚನೆಯಂತೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದರು.
ನಿಗದಿತ ವಾಹನ ನಿಲುಗಡೆ ಸ್ಥಳದಲ್ಲಿ ಮಾತ್ರ ವಾಹನ ನಿಲ್ಲಿಸುವಂತೆ ವಾಹನ ಸವಾರರಿಗೆ ಎಚ್ಚರಿಕೆ ನೀಡಿದರು.
ನ್ಯಾಯಾಲಯ ಆವರಣ ಪ್ರವೇಶಿಸಿದ ಬಳಿಕ ಸಾರ್ವಜನಿಕರು ಶಿಸ್ತು ಪಾಲಿಸುವುದು ಕಡ್ಡಾಯ. ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಾಟಲ್ ಬೀಸಾಡಬಾರದು. ಶೌಚಾಲಯದ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.