ADVERTISEMENT

ಶಿಕ್ಷಣದ ಗುಣಮಟ್ಟ ಹೆಚ್ಚಿಸಿ: ಶಾಸಕ ಶರತ್ ಬಚ್ಚೇಗೌಡ

ಗೌತಮ್‌ ಕಾಲೊನಿಯ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 4:20 IST
Last Updated 22 ಅಕ್ಟೋಬರ್ 2020, 4:20 IST
ಹೊಸಕೋಟೆಯ ಗೌತಮ್ ಕಾಲೊನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು
ಹೊಸಕೋಟೆಯ ಗೌತಮ್ ಕಾಲೊನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು   

ಹೊಸಕೋಟೆ: ‘ಕೊರೊನಾ ಸೋಂಕಿನ ಪರಿಣಾಮ ಖಾಸಗಿ ಶಾಲೆಗಳ ಶುಲ್ಕ ಭರಿಸಲಾಗದೆ ಮತ್ತು ಆನ್‌ಲೈನ್ ಕ್ಲಾಸ್‌ ಸಮಸ್ಯೆಯಿಂದ ಸಾಮಾನ್ಯ ಜನರು ಈಗ ಸರ್ಕಾರಿ ಶಾಲೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಹಾಗಾಗಿ, ಮಕ್ಕಳು ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ದಾಖಲಾಗುತ್ತಿದ್ದಾರೆ’ ಎಂದು ಶಾಸಕಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟರು.

ನಗರದ ಗೌತಮ್ ಕಾಲೊನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತೋಷಿಮಾ ಪಂಪ್‌ಸೆಟ್ ಕಂಪನಿಯವರು ತಮ್ಮ ಸಿಎಸ್‌ಆರ್‌ ಹಣದಲ್ಲಿ ಕಟ್ಟಡ ನಿರ್ಮಾಣಕ್ಕೆ ₹ 25 ಲಕ್ಷ ಅನುದಾನ ನೀಡಿದ್ದಾರೆ ಎಂದರು.

ADVERTISEMENT

ಈಗಿನ ಕಾಲದಲ್ಲಿ ಮೂಲ ಸೌಕರ್ಯವೇ ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಗಳ ನಡುವೆ ಇರುವ ಸಾಮಾನ್ಯ ವ್ಯತ್ಯಾಸ. ಖಾಸಗಿಯವರ ಸಹಭಾಗಿತ್ವದಡಿ ಮೂಲಸೌಕರ್ಯ ಕಲ್ಪಿಸಿದರೆ ಸರ್ಕಾರಿ ಶಾಲೆಗಳಿಗೆ ಹೆಚ್ಚು ಮಕ್ಕಳು ಪ್ರವೇಶಾತಿ ಪಡೆಯುತ್ತಾರೆ ಎಂದು ಹೇಳಿದರು.

ಈ ಮೊದಲು ಶಾಲೆಯಲ್ಲಿ 150ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಶಾಲೆಯಲ್ಲಿ ಓದಿದ ಹಲವರು ನಮ್ಮ ಕಾರ್ಯಕರ್ತರಾಗಿರುವುದು ಹೆಮ್ಮೆ ತಂದಿದೆ. ಈಗ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಗೌತಮ್, ಕೇಶವಮೂರ್ತಿ, ಮುಖಂಡರಾದ ಸುಬ್ಬರಾಜು, ಶಿವರಾಜ್, ವಿಜಯ್ ಕುಮಾರ್‍, ಬಲ್ಪ್ ಮಂಜುನಾಥ್, ಉದಯ್ ಕುಮಾರ್‍ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.