ವಿಜಯಪುರ: ಕೋರಮಂಗಲ ಬಯಲು ಕಾರಾಗೃಹದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಧೀಕ್ಷಕ ಮೋಹನ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು
ಕಾರಾಗೃಹದ ಕೈದಿಗಳಿಗೆ ಸಿಹಿ ಹಂಚಿಕೆ ಮಾಡಿ, ಶುಭಾಶಯ ಕೋರಿದರು. ಕೈದಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು.
ನಂತರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಂವಿಧಾನದಡಿ ದೇಶದ ಪ್ರತಿಯೊಬ್ಬ ಪ್ರಜೆಗೂ ಬದುಕುವ ಹಕ್ಕು ಸಿಕ್ಕಿದೆ. ಅದನ್ನು ಸದುಪಯೋಗ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೆ ಅಪರಾಧ ಮುಕ್ತ ಜೀವನ ನಡೆಸುವ ಕಡೆಗೆ ಚಿಂತನೆ ನಡೆಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.