ADVERTISEMENT

ಲಸಿಕೆ ನೀಡಿಕೆಯಲ್ಲಿ ಭಾರತ ಮುಂಚೂಣಿ -ಎಂ.ಟಿ.ಬಿ. ನಾಗರಾಜ್

ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್‌ ಅಭಿಮತ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 6:58 IST
Last Updated 11 ಜನವರಿ 2022, 6:58 IST
ಹೊಸಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂರನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಪೌರಾಡಳಿತ ಖಾತೆ ಸಚಿವ ಎಂ.ಟಿ.ಬಿ. ನಾಗರಾಜ್ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ವೀಣಾ ಹಾಜರಿದ್ದರು
ಹೊಸಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂರನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಪೌರಾಡಳಿತ ಖಾತೆ ಸಚಿವ ಎಂ.ಟಿ.ಬಿ. ನಾಗರಾಜ್ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ವೀಣಾ ಹಾಜರಿದ್ದರು   

ಹೊಸಕೋಟೆ: ‘ಕೊರೊನಾ ಮೂರನೇ ಅಲೆ ತಡೆಯಲು ಕೇಂದ್ರ ಸರ್ಕಾರದಿಂದ ಮೂರನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್ ತಿಳಿಸಿದರು.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರನೇ ಹಂತದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೊದಲಿಗೆ 60 ವರ್ಷ ಮೇಲ್ಪಟ್ಟ ,ವಿವಿಧ ತೊಂದರೆಗಳಿಂದ ಬಳಲುತ್ತಿರುವವರಿಗೆ ಮತ್ತು ಕೊರೊನಾ ವಾರಿಯರ್ಸ್‌ಗೆ ಲಸಿಕೆ ನೀಡಲಾಗುವುದು. ಆ ನಂತರ ಹಂತ ಹಂತವಾಗಿ ದೇಶದ ಎಲ್ಲಾ ಸಾರ್ವಜನಿಕರಿಗೂ ಈ ಯೋಜನೆ ವಿಸ್ತರಿಸಲಾಗುತ್ತದೆ ಎಂದರು.

ADVERTISEMENT

ಪ್ರಪಂಚದ ಎಷ್ಟೋ ಮುಂದುವರಿದ ರಾಷ್ಟ್ರಗಳಲ್ಲಿ ಇನ್ನೂ ಮೊದಲನೇ ಹಂತದ ಲಸಿಕೆ ನೀಡಲು ಪರದಾಡುತ್ತಿರುವಾಗ ಭಾರತದಲ್ಲಿ ಮೂರನೇ ಹಂತದ ಲಸಿಕೆ ನೀಡುತ್ತಿರುವುದು ಹೆಮ್ಮೆಯ ವಿಚಾರ. ಎಲ್ಲರೂ ಲಸಿಕೆ ಪಡೆಯಬೇಕು. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲಿಯೂ ಮುನ್ನೆಚ್ಚರಿಕೆ ಮೀರಬಾರದು ಎಂದು ಎಚ್ಚರಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ವೀಣಾ ಮಾತನಾಡಿ, ನಗರದ ಆರೋಗ್ಯ ಕೇಂದ್ರ ಸೇರಿದಂತೆ ತಾಲ್ಲೂಕಿನ ಒಟ್ಟು 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂರನೇ ಹಂತದ ಲಸಿಕೆ ವಿತರಣೆಗೆ ಸಿದ್ಧತೆ ನಡೆಸಿದೆ. 60 ವರ್ಷ ಮೇಲ್ಪಟ್ಟು ಎರಡನೇ ಲಸಿಕೆ ಪಡೆದು 9 ತಿಂಗಳು ಪೂರೈಸಿರುವವರು ಈ ಲಸಿಕೆ ಪಡೆಯಬಹುದು ಎಂದುಹೇಳಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ.ಸತೀಶ್, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಕ ಗುರುರಾಜ್, ನಗರಸಭೆ ಅಧ್ಯಕ್ಷ ಡಿ.ಕೆ. ನಾಗರಾಜ್, ಸ್ಥಾಯಿಸಮಿತಿ ಅಧ್ಯಕ್ಷ ಸೋಮಶೇಖರ್‌, ಸದಸ್ಯರಾದ ನಿತಿನ್ ಶ್ರೀನಿವಾಸ್, ಶೋಭಾ ಜುಂಜಪ್ಪ, ಮುಬಾರಕ್, ಟೌನ್ ಬ್ಯಾಂಕ್ ಅಧ್ಯಕ್ಷ ಎನ್. ಬಾಲ ಚಂದ್ರನ್, ರಾಜಶೇಖರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.