ADVERTISEMENT

ದೇವನಹಳ್ಳಿ: ಇಂಡಿಗೋ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟನೆ 

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 2:33 IST
Last Updated 7 ಡಿಸೆಂಬರ್ 2025, 2:33 IST
ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗೇಟ್ ಬಳಿ ವಾಟಾಳ್ ನಾಗರಾಜ್‌ ಪ್ರತಿಭಟನೆ ನಡೆಸಿದರು
ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗೇಟ್ ಬಳಿ ವಾಟಾಳ್ ನಾಗರಾಜ್‌ ಪ್ರತಿಭಟನೆ ನಡೆಸಿದರು   

ದೇವನಹಳ್ಳಿ: ಇಂಡಿಗೋ ಏರ್ ಲೈನ್ಸ್ ವಿಮಾನ ವ್ಯತ್ಯಯದಿಂದ ಪ್ರಯಾಣಿಕರ ಪರದಾಡುತ್ತಿರುವುದಕ್ಕೆ ಸಂಸ್ಥೆ ಲೋಪವೇ ಕಾರಣ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸಾದಹಳ್ಳಿ ಸಮೀಪದ ಟೋಲ್‌ ಗೇಟ್ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಕಳೆದ ನಾಲ್ಕು ದಿನಗಳಿಂದ ಇಂಡಿಗೋ ವಿಮಾನ ಸಂಸ್ಥೆಗಳು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಸಾಕಷ್ಟು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಅತಂತ್ರ ಪರಿಸ್ಥಿತಿಗೆ ಸಿಲುಕಿದ್ದಾರೆ. ಇದನ್ನು ಸರಿಪಡಿಸುವಲ್ಲಿ ವಿಮಾನಯಾನ ಸಂಸ್ಥೆಗಳು ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲ. ಇಷ್ಟು ಸಮಸ್ಯೆಗಳಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಏಕೆ ಮೌನ ವಹಿಸಿದ್ದಾರೆ ಎಂದು ಕಿಡಿಕಾರಿದರು.

ನಾಳೆ ಬೆಳಗ್ಗೆ ವಿಮಾನ ಎಲ್ಲಾ ಸಮಸ್ಯೆ ಬಗೆ ಹರಿಯಬೇಕು. ಇಲ್ಲದಿದ್ದರೆ ನಾಳೆ ಸಂಜೆ ವಿಮಾನ ನಿಲ್ದಾಣ ರಸ್ತೆ ಬಂದು ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.