ADVERTISEMENT

ಇಂಡೋ-ಭೂತಾನ್ ಕಬಡ್ಡಿ ಪಂದ್ಯಾವಳಿಗೆ ಹೊಸಕೋಟೆ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2025, 2:10 IST
Last Updated 29 ನವೆಂಬರ್ 2025, 2:10 IST
ಇಂಡೋ-ಭೂತಾನ್ ಅಂತರ್ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗೆ ಭಾರತ ತಂಡಕ್ಕೆಆಯ್ಕೆ ಆದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕೋಚ್‌ ಇದ್ದಾರೆ
ಇಂಡೋ-ಭೂತಾನ್ ಅಂತರ್ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗೆ ಭಾರತ ತಂಡಕ್ಕೆಆಯ್ಕೆ ಆದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕೋಚ್‌ ಇದ್ದಾರೆ   

ಹೊಸಕೋಟೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಭೂತಾತ್‌ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ಕಾಲೇಜಿನ ಆರ್. ಚರಣ್, ಎ.ಎನ್. ಲಿಖಿತ್ ಮತ್ತು ಜಿ. ಸೃಜನ್ ಭಾರತ ತಂಡದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಮೂವರು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಆತ್ಮೀಯವಾಗಿ ಬೀಳ್ಕೊಡಿಗೆ ನೀಡಿ, ಗೆದ್ದು ಬರುವಂತೆ ಸಿಬ್ಬಂದಿ ಹಾರೈಸಿದರು.

ADVERTISEMENT

ಕಬಡ್ಡಿಯ ಕೋಚ್ ರವಿಕಿರಣ್ ಕಳೆದ 3 ತಿಂಗಳಿನಿಂದ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಬಾಬು ತರಬೇತಿಯ ಜೊತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ ಎಂದು ಪ್ರಾಂಶುಪಾಲ ರಾಮಲಿಂಗಪ್ಪ ಟಿ. ಬೇಗೂರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.