
ಪ್ರಜಾವಾಣಿ ವಾರ್ತೆ
ಮಗು (ಪ್ರಾತಿನಿಧಿಕ ಚಿತ್ರ)
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಹಾಗೂ ತಿರುಮಗೊಂಡನಹಳ್ಳಿ ನಡುವಿನ ಖಾಸಗಿ ಬಡಾವಣೆಯ ನಿರ್ಜನ ಪ್ರದೇಶದಲ್ಲಿ ಶನಿವಾರ ರಾತ್ರಿ 5 ದಿನದ ಹಸಗೂಸು ಪತ್ತೆಯಾಗಿದೆ.
ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು ಹುಡುಕಾಟ ನಡೆಸಿ ಮಗು ರಕ್ಷಿಸಿ, ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದಾರೆ. ಮಗುವನ್ನು ತಮ್ಮ ವಶಕ್ಕೆ ಪಡೆದ ಸಹಾಯವಾಣಿ ಅಧಿಕಾರಿಗಳು ನಗರದ ತಾಯಿ ಮಗು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಮಗು ಆರೋಗ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.