ADVERTISEMENT

ಪ್ರಾಥಮಿಕ ಸಂಪರ್ಕಿತರ ಮಾಹಿತಿ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 14:54 IST
Last Updated 23 ಜುಲೈ 2020, 14:54 IST
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯ್ಕ ಇತರ ಅಧಿಕಾರಿಗಳು ಇದ್ದರು 
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯ್ಕ ಇತರ ಅಧಿಕಾರಿಗಳು ಇದ್ದರು    

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿತ ವ್ಯಕ್ತಿಗಳು ತಮ್ಮ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಅವರು ಸೂಚಿಸಿದರು.

ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಕೊರೊನಾ ನಿಯಂತ್ರಣ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವ ಸೋಂಕಿತ ವ್ಯಕ್ತಿ ಮಾಹಿತಿ ನೀಡುವುದಿಲ್ಲವೋ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಸೋಂಕು ಪತ್ತೆಯಾದ ಸ್ಥಳವನ್ನು ಕಂಟೈನ್‌ಮೆಂಟ್‌ ವಲಯ ಎಂದು ಪರಿಗಣಿಸಲಾಗುವುದು. ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಎಂದು ಪರಿಗಣಿಸಿ ಅಂತಹವರನ್ನು ಹೋಮ್ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದವರಿಗೆ ಮೊದಲು ಎಚ್ಚರಿಕೆ ನೀಡಲಾಗುವುದು. ನಂತರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ , ತಾಲ್ಲೂಕು ಆರೋಗ್ಯಾಧಿಕಾರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.