ADVERTISEMENT

ದೇವನಹಳ್ಳಿ | ಮೂಲಸೌಕರ್ಯ ಕೊರತೆ: ಸಚಿವ ಮುನಿಯಪ್ಪಗೆ ಮಹಿಳೆಯರ ತರಾಟೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 7:01 IST
Last Updated 28 ಅಕ್ಟೋಬರ್ 2025, 7:01 IST
ಕೆ.ಎಚ್‌. ಮುನಿಯಪ್ಪ
ಕೆ.ಎಚ್‌. ಮುನಿಯಪ್ಪ   

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಚನ್ನರಾಯಪಟ್ಟಣ ಹೋಬಳಿ ಯಲಿಯೂರು ಗ್ರಾಮ ಪಂಚಾಯತಿಯಲ್ಲಿ ನಂದಿನಿ ಭವನ ಉದ್ಘಾಟನೆಗೆ ಬಂದಿದ್ದ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಗ್ರಾಮದ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಮರೀಚಿಕೆಯಾಗಿದೆ, ಕುಡಿಯುವ ನೀರು, ಸುಸಜ್ಜಿತ ರಸ್ತೆ, ಚರಂಡಿ ವ್ಯವಸ್ಥೆ ಮಾಡುವಂತೆ ಸಚಿವರಿಗೆ ಮಹಿಳೆಯರು ಅರ್ಜಿ ನೀಡಿ ಆಗ್ರಹಿಸಿದರು.

ಬಡವರ ನಿವೇಶನಗಳನ್ನು ಉಳ್ಳವರಿಗೆ ಮಂಜೂರಿ ಮಾಡಲಾಗುತ್ತಿದೆ. ದೀನ ದಲಿತರಿಗೆ ಏಳಿಗೆಗೆ ತುಸುವಾದರೂ ಕೆಲಸ ಮಾಡಿ ಎಂದು ಮಹಿಳೆಯರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ADVERTISEMENT

ಗುಂಪು, ಗುಂಪಾಗಿ ಬಂದಿದ್ದ ನೂರಾರು ಮಹಿಳೆಯರು ತಂದಿದ್ದ ಅರ್ಜಿಗಳನ್ನು ಜಿಲ್ಲಾ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಬಯಪ್ಪಾ ಅಧ್ಯಕ್ಷ ವಿ.ಶಾಂತಕುಮಾರ್ ಸಂಗ್ರಹಿಸಿದರು.

ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ಗ್ರಾಮಸ್ಥರನ್ನು ಸಮಾಧಾನಪಡಿಸಿ ಹೊರಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.