ADVERTISEMENT

ನಿರ್ವಾಹಕರ ಅಮಾನತು ರದ್ದತಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 2:59 IST
Last Updated 2 ಆಗಸ್ಟ್ 2021, 2:59 IST

ದೇವನಹಳ್ಳಿ:ಬಿಎಂಟಿಸಿ ಬಸ್‌ನಲ್ಲಿ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪಾನಮತ್ತ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲು ಎಳೆದಾಡಿರುವ ವಿಡಿಯೊ ಆಧರಿಸಿ ಪ್ರಸಾರವಾಗಿರುವ ಸುದ್ದಿಯ ಮೇರೆಗೆ ಮೂವರು ನಿರ್ವಾಹಕರನ್ನು ಅಮಾನತುಪಡಿಸಿರುವ ಇಲಾಖೆಯ ಅಧಿಕಾರಿಗಳ ಕ್ರಮ ಖಂಡನೀಯ ಎಂದು ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಗಜೇಂದ್ರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸಿನಲ್ಲಿ ಮಹಿಳೆಯರಿಗೆ ಮೀಸಲಿಟ್ಟಿದ್ದ ಆಸನದಲ್ಲಿ ಕುಳಿತಿದ್ದ ಪಾನಮತ್ತ ವ್ಯಕ್ತಿಯನ್ನು ಸೀಟು ಬಿಟ್ಟು ಬೇರೆ ಕಡೆಗೆ ಹೋಗುವಂತೆ ತಿಳಿಸಿದಾಗ ನಿರ್ವಾಹಕರನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ನಿರ್ವಾಹಕರ ಕೈಯಲ್ಲಿದ್ದ ಟಿಕೆಟ್ ಹಂಚಿಕೆ ಯಂತ್ರವನ್ನು ನೆಲಕ್ಕೆ ಎಸೆದು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ’ ಎಂದರು.

ರಂಪಾಟ ಸೃಷ್ಟಿಸಿದ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲು ಆತನನ್ನು ಬಸ್ ಕಡೆಗೆ ಎಳೆದಾಡುವಾಗ ಪ್ರಯಾಣಿಕನ ಮೇಲೆ ಹಲ್ಲೆ ಎಂದು ಬಿಂಬಿಸಲಾಗಿದೆ. ಈ ಸುದ್ದಿ ಆಧರಿಸಿ ಮೂವರನ್ನು ಸೇವೆಯಿಂದ ಅಮಾನತುಗೊಳಿಸಿರುವುದು ಖಂಡನೀಯ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ವಾಹಕರನ್ನು ಕರ್ತವ್ಯಕ್ಕೆ ಮರು ನೇಮಕ ಮಾಡಬೇಕು. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.