ADVERTISEMENT

ಅಂಬೇಡ್ಕರ್‌ಗೆ ಅಪಮಾನ: ಆರೋಪ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 5:03 IST
Last Updated 15 ಮಾರ್ಚ್ 2023, 5:03 IST
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನವೆಸಗಿದ್ದಾರೆ ಎನ್ನಲಾಗುತ್ತಿರುವ ಚಿತ್ರ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನವೆಸಗಿದ್ದಾರೆ ಎನ್ನಲಾಗುತ್ತಿರುವ ಚಿತ್ರ.   

ವಿಜಯಪುರ (ದೇವನಹಳ್ಳಿ): ಬಿಜೆಪಿ ಕಾರ್ಯಕ್ರಮವೊಂದಕ್ಕೆ ಅಳವಡಿಸಿರುವ ಬ್ಯಾನರ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲಿನ ಬಳಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕಿ ಅಪಮಾನ ಮಾಡಲಾಗಿದೆ. ಈ ಬ್ಯಾನರ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ನಾಗರಾಜ್ ದೂರಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಈ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಬೇಕು. ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂವಿಧಾನ ಸೇರಿದಂತೆ ಅಂಬೇಡ್ಕರ್ ಅವರಿಗೆ ಅಪಮಾನವಾಗುವಂತಹ ಘಟನೆಗಳು ನಡೆಯುತ್ತಿವೆ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.