ADVERTISEMENT

ಸಮಗ್ರ ಬೇಸಾಯ ಪದ್ಧತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 12:36 IST
Last Updated 24 ಆಗಸ್ಟ್ 2022, 12:36 IST

ದೊಡ್ಡಬಳ್ಳಾಪುರ:ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್. ಮರಿಗೌಡ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆ. 25ರಂದು ಬೆಳಿಗ್ಗೆ 10.30ಕ್ಕೆ ಚಪ್ಪರದಕಲ್ಲು ಸಮೀಪದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಭವನದಲ್ಲಿ ‘ಉದಯೋನ್ಮುಖ ಹಣ್ಣುಗಳ ಪ್ರಾಮುಖ್ಯತೆ ಮತ್ತು ಸಮಗ್ರ ಬೇಸಾಯ ಪದ್ಧತಿ’ ಕುರಿತು ತರಬೇತಿ ಕಾರ್ಯಾಗಾರ ನಡೆಯಲಿದೆ.

ಕಾರ್ಯಾಗಾರದಲ್ಲಿ ಹಿರಿಯ ತೋಟಗಾರಿಕಾ ತಜ್ಞ ಡಾ.ಹಿತ್ತಲಮನಿ ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್‌. ದೀಪಾ ತಿಳಿಸಿದ್ದಾರೆ.

ಆಸಕ್ತ ರೈತರು ಹೆಚ್ಚಿನ ಮಾಹಿತಿಗೆ ಮೊಬೈಲ್ 98802 10892 ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.