ಶಾಸಕ ಬಿ.ಶಿವಣ್ಣ
ಆನೇಕಲ್: ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿವೆ. ಅತ್ತಿಬೆಲೆವರೆಗೆ ಮೆಟ್ರೊ ವಿಸ್ತರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ₹1,650 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದೆ. ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.