ADVERTISEMENT

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 4:22 IST
Last Updated 22 ಜುಲೈ 2021, 4:22 IST
ಚನ್ನರಾಯಪಟ್ಟಣ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಚಿತಾಗಾರ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ. ಲಕ್ಷ್ಮೀನಾರಾಯಣಪ್ಪ ಚಾಲನೆ ನೀಡಿದರು
ಚನ್ನರಾಯಪಟ್ಟಣ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಚಿತಾಗಾರ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ. ಲಕ್ಷ್ಮೀನಾರಾಯಣಪ್ಪ ಚಾಲನೆ ನೀಡಿದರು   

ದೇವನಹಳ್ಳಿ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳು, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಪೂರ್ಣಗೊಳಿಸದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು (ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ) ಜುಲೈ 25 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ www.bcwd.karnataka.gov.in ಸಂಪರ್ಕಿಸಬಹುದು ಹಾಗೂ ವೆಬ್‌ಸೈಟ್ www.ssp.postmatric.karnataka.gov.inನಲ್ಲಿ ಅರ್ಜಿ ಪೂರ್ಣಗೊಳಿಸದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು
ಜುಲೈ 25 ಕೊನೆಯ ದಿನ
ವಾಗಿದೆ.

ADVERTISEMENT

ಹೆಚ್ಚಿನ ಮಾಹಿತಿಗೆ ಇಲಾಖೆಯ ದೂರವಾಣಿ ಸಂಖ್ಯೆ 80507 70005, 80507 70004, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmetrichelpdesk@karnataka.gov.in, ಸಹಾಯವಾಣಿ ಸಂಖ್ಯೆ 080-29787440 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.