ADVERTISEMENT

ಇರಾನ್–ಇಸ್ರೇಲ್ ಸಂಘರ್ಷ: 24 ವಿಮಾನ ಹಾರಾಟ ರದ್ದು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 22:53 IST
Last Updated 2 ಮಾರ್ಚ್ 2026, 22:53 IST
<div class="paragraphs"><p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ</p></div>

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

   

ದೇವನಹಳ್ಳಿ: ಇರಾನ್–ಇಸ್ರೇಲ್ ಸಂಘರ್ಷ ಹಿನ್ನಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ಸೋಮವಾರವೂ ವ್ಯತ್ಯಯವಾಗಿದ್ದು, 24 ವಿಮಾನಗಳ ಹಾರಾಟ ರದ್ದಾಗಿದೆ.

ವಾಯುಪ್ರದೇಶ ನಿರ್ಬಂಧದಿಂದ ವಿವಿಧೆಡೆಯಿಂದ ಬೆಂಗಳೂರಿಗೆ ಬರಬೇಕಿದ್ದ 15 ಹಾಗೂ ಇಲ್ಲಿಂದ ತೆರಳಬೇಕಿದ್ದ 9 ವಿಮಾನಗಳ ಹಾರಾಟ ರದ್ದುಗೊಂಡಿದೆ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ವಕ್ತಾರರು ತಿಳಿಸಿದ್ದಾರೆ.

ADVERTISEMENT

ಅಬುಧಾಬಿ, ರಿಯಾದ್, ದಮಾಮ್, ದುಬೈ ಮತ್ತು ದೋಹಾ ನಗರ ಸೇರಿದಂತೆ ಹಲವೆಡೆಗೆ ವಿಮಾನಯಾನ ಸ್ಥಗಿತಗೊಂಡಿದೆ. 

ಪರಿಸ್ಥಿತಿ ತಿಳಿಯಾಗುವವರೆಗೆ ವಿಮಾನ ವೇಳಾಪಟ್ಟಿಯಲ್ಲಿ ಬದಲಾವಣೆ ಇರಲಿದೆ. ಪ್ರಯಾಣಿಕರು ಸಂಬಂಧಿತ ವಿಮಾನಯಾನ ಸೇವಾ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.