ADVERTISEMENT

ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 6:24 IST
Last Updated 14 ಏಪ್ರಿಲ್ 2022, 6:24 IST
ಸೂಲಿಬೆಲೆ ಹೋಬಳಿಯ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಬ್ಯೂಟಿಕ್ ತರಬೇತಿ ಪಡೆದ ಶಿಬಿರಾರ್ಥಿಗಳು
ಸೂಲಿಬೆಲೆ ಹೋಬಳಿಯ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಬ್ಯೂಟಿಕ್ ತರಬೇತಿ ಪಡೆದ ಶಿಬಿರಾರ್ಥಿಗಳು   

ಸೂಲಿಬೆಲೆ: ಹೋಬಳಿಯ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಬ್ಯೂಟಿಕ್ ತರಬೇತಿ ಪಡೆದ ಮಹಿಳಾ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

‘ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆಯು ಮಹಿಳೆಯರಿಗೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಪೂರಕವಾದ ಸ್ವಉದ್ಯೋಗ ತರಬೇತಿ ಶಿಬಿರಗಳನ್ನು ನಡೆಸುತ್ತಿದೆ. ತರಬೇತಿ ಪಡೆದವರು ಸ್ವಂತ ಉದ್ದಿಮೆ ಕಟ್ಟಿಕೊಳ್ಳಲು ಮುಂದಾಗಬೇಕು’ ಎಂದು ಸಮಾಜ ಸೇವಕಿ ಪ್ರತಿಭಾ ಶರತ್ ಬಚ್ಚೇಗೌಡ ಸಲಹೆ ನೀಡಿದರು.

ಸಂಸ್ಥೆಯ ನಿರ್ದೇಶಕ ಗಿರಿಯಪ್ಪ ಮಾತನಾಡಿ, ಸಂಸ್ಥೆ ಪ್ರಾರಂಭದಿಂದ ಇಂದಿನವರೆಗೆ 25 ಸಾವಿರ ಶಿಬಿರಾರ್ಥಿಗಳಿಗೆ ವಿವಿಧ ವಲಯಗಳಲ್ಲಿ ತರಬೇತಿ ನೀಡಲಾಗಿದೆ. ಯುವಕರು, ಯುವತಿಯರಿಗೆ ತರಬೇತಿ ನೀಡಲಾಗುತ್ತಿದ್ದು, ವೃತ್ತಿಯಲ್ಲಿ ತೊಡಗಿಸಿಕೊಂಡು ಸ್ವಉದ್ಯೋಗಿಗಳಾಗಬೇಕು ಎಂದರು. ಸಂಸ್ಥೆಯ ಸುಗುಣ, ನಾಗೇಶ್, ನಾಗರಾಜ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.