ADVERTISEMENT

ಜಾಲಪ್ಪ ಪುತ್ರನ ಮನೆಯಲ್ಲಿ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 6:08 IST
Last Updated 10 ಅಕ್ಟೋಬರ್ 2019, 6:08 IST
ದೊಡ್ಡಬಳ್ಳಾಪುರದಲ್ಲಿರುವ ಜಾಲಪ್ಪ ಪುತ್ರ ರಾಜೇಂದ್ರ ಅವರ ಮನೆ
ದೊಡ್ಡಬಳ್ಳಾಪುರದಲ್ಲಿರುವ ಜಾಲಪ್ಪ ಪುತ್ರ ರಾಜೇಂದ್ರ ಅವರ ಮನೆ   

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ನಗರದ ಸೋಮೇಶ್ವರ ಬಡಾವಣೆಯಲ್ಲಿರುವ ಆರ್.ಎಲ್.ಜಾಲಪ್ಪ ಅವರ ಮೂರನೇ ಪುತ್ರ ಜೆ.ರಾಜೇಂದ್ರ ಅವರ ಮನೆ ಹಾಗೂ ನಗರದ ಹೊರವಲಯದಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ವಿವಿಯಲ್ಲಿನ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಗುರುವಾರ ಬೆಳಗಿನಿಂದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಎರಡು ಖಾಸಗಿ ಇನೋವ ಕಾರಿನಲ್ಲಿ ಬಂದಿರುವ ಎಂಟು ಜನರಿರುವ ಅಧಿಕಾರಿಗಳ ತಂಡ ದಾಖಲೆಗಳ ಪರಶೀಲನೆಯಲ್ಲಿ ತೊಡಗಿದೆ.

ಸೋಮೇಶ್ವರ ಬಡಾವಣೆಯ ಜೆ.ರಾಜೇಂದ್ರ ಅವರ ಮನೆಯಲ್ಲಿ ನಾಲ್ಕು ಜನ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತಿದ್ದಾರೆ. ಮನೆಯ ಬಾಗಿಲು ಹಾಕಿಲ್ಲ. ಹೀಗಾಗಿ ಅಧಿಕಾರಿಗಳು ಮನೆಯ ಒಳಗೆ ಕುಳಿತು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವುದು ಕಾಣುತ್ತದೆ. ಮನೆಯವರು ಎಂದಿನಂತೆಯೆ ಒಡಾಡಿಕೊಂಡು ಕೆಲಸದಲ್ಲಿ ತೊಡಗಿದ್ದ ದೃಶ್ಯ ಕಂಡು ಬಂತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.