
ದೇವನಹಳ್ಳಿ: ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಅದರಂತೆ ಹಲವು ಕಾಮಗಾರಿಗಳು ನಡೆಯುತ್ತಿವೆ ಎಂದು ಪಂಚಾಯಿತಿ ಅಧ್ಯಕ್ಷ ಎಸ್.ಎಂ. ಆನಂದ್ ಕುಮಾರ್ ಹೇಳಿದರು.
ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಂಗ್ರಹಳ್ಳಿಯಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿ, ಗ್ರಾಮಗಳ ಸುರಕ್ಷಿತೆಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಧನ ನೀಡಲಾಗುತ್ತದೆ. ಫೋಷಕರು ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಗ್ರಾ.ಪಂ ಆಯ್ಯವ್ಯಯ ಹಾಗೂ ಅಭಿವೃದ್ಧಿ ಕೆಲಸಗಳ ಪ್ರಗತಿಯ ಮಂಡನೆ ಮಾಡಿದರು.
ಗ್ರಾಮ ಸಭೆಯಲ್ಲಿ ಪಂಚಾಯಿತಿ ವತಿಯಿಂದ ಹಾಲು ಉತ್ಪಾದಕರಿಗೆ ಸನ್ಮಾನಿಸಿ, ತರಬೇತಿ ಪಡೆದಂತಹ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಅಂಗವಿಕಲರಿಗೆ ಹಾಗೂ ಪಿಯುಸಿ, ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಮತ್ತು ಪ್ರೋತ್ಸಾಹ ಧನ ನೀಡಲಾಯಿತು.
ಇದೇ ಸಂದರ್ಭದಲ್ಲಿ ನೋಡಲ್ ಅಧಿಕಾರಿ ಧನಂಜಯ.ಎಲ್.ಪಿ, ಜಾಲಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭವ್ಯ .ಕೆ ಪ್ರಶಾಂತ್, ಸದಸ್ಯರಾದ ದೀಪ್ತಿ, ಬಾಲಸುಬ್ರಹ್ಮಣ್ಯ, ಬಿ.ಆರ್. ಮಹೇಶ್ ಕುಮಾರ್, ಸುಬ್ರಮಣ್ಯ, ವಿಜಯ ರಾಘವೇಂದ್ರ ,ಆನಂದ್, ,ಮಂಜುಳಾ, ಶೋಭಾ, ಕೆಂಪರಾಜು, ಅಪ್ಪಯ್ಯ, ಸುಚಿತ್ರ, ಮುನಿಯಪ್ಪ, ಮುನಿರತ್ನಮ್ಮ, ಜಯಮ್ಮ, ಎಂ.ಅಶ್ವಿನಿ ,ಶಿವಲಿಂಗಮ್ಮ, ಗೋಪಿನಾಥ್, ಸೌಮ್ಯ, ಲಕ್ಷ್ಮಮ್ಮ, ಪದ್ಮಾವತಿ, ಪಂಚಾಯಿತಿ ಕಾರ್ಯದರ್ಶಿ ನರಸಿಂಹಮೂರ್ತಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವಿಶ್ವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.