ADVERTISEMENT

ಸಮಾಲೋಚನಾ ಸಭೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 2:54 IST
Last Updated 20 ಅಕ್ಟೋಬರ್ 2020, 2:54 IST
ವಿಜಯಪುರ ಪಟ್ಟಣದಲ್ಲಿ ಆಯೋಜಿಸಿದ್ದ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು
ವಿಜಯಪುರ ಪಟ್ಟಣದಲ್ಲಿ ಆಯೋಜಿಸಿದ್ದ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು   

ವಿಜಯಪುರ: ‘ಶಿಕ್ಷಕರ ಸಮಸ್ಯೆ ಪರಿಹರಿಸುವಲ್ಲಿ ಬಿಜೆಪಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ವಿ. ರಂಗನಾಥ್ ದೂರಿದರು.

ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಖಾಸಗಿ, ಅನುದಾನಿತ ಶಾಲಾ ಶಿಕ್ಷಕರ ಸಮಸ್ಯೆ ಆಲಿಸಿ ಅವರಿಗೆ ಪರಿಹಾರ ಕೊಡಿಸುವಲ್ಲಿ ಶಿಕ್ಷಕರ ಪ್ರತಿನಿಧಿ ವಿಫಲರಾಗಿದ್ದಾರೆ. ಆದ್ದರಿಂದ ಶಿಕ್ಷಕರು ಈ ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕೋರಿದರು.

ADVERTISEMENT

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ‘ಜೆಡಿಎಸ್‌ನಿಂದಲೇ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಪುಟ್ಟಣ್ಣ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಆರು ವರ್ಷಗಳ ಕಾಲ ಶಿಕ್ಷಕರು ನೀಡಿದ್ದ ಅವಕಾಶವನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಶ್ರೀನಿವಾಸ್, ಕಾರ್ಯಾಧ್ಯಕ್ಷ ಕಾರಹಳ್ಳಿ ಮುನೇಗೌಡ, ನಗರ ಘಟಕದ ಅಧ್ಯಕ್ಷ ಎಸ್. ಭಾಸ್ಕರ್ ಮಾತನಾಡಿದರು. ಮುಖಂಡರಾದ ಜಿ.ಎ. ರವೀಂದ್ರ, ಕೋರಮಂಗಲ ವೀರಪ್ಪ, ಮುನಿರಾಜು, ಶ್ರೀನಿವಾಸ್, ಕಾರ್ಮೆಲ್ ಕಾಲೇಜಿನ ಸಂಸ್ಥಾಪಕ ಚಂದ್ರಶೇಖರ್, ಕೃಷ್ಣಪ್ಪ, ಪ್ರೊ.ಶ್ರೀನಿವಾಸಮೂರ್ತಿ, ಮುನಿರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.