ADVERTISEMENT

ಜಿಗಣಿಯಲ್ಲಿ ಅಪಘಾತ: ಬೈಕ್‌ ಸವಾರು ಸಾವು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 4:34 IST
Last Updated 5 ಫೆಬ್ರುವರಿ 2026, 4:34 IST
ಆನೇಕಲ್‌ ತಾಲ್ಲೂಕಿನ ಜಿಗಣಿಯಲ್ಲಿ ಕಾರು-ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿರುವುದು
ಆನೇಕಲ್‌ ತಾಲ್ಲೂಕಿನ ಜಿಗಣಿಯಲ್ಲಿ ಕಾರು-ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿರುವುದು   

ಆನೇಕಲ್: ತಾಲ್ಲೂಕಿನ ಜಿಗಣಿಯಲ್ಲಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿ ಕಾರವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಜಯಪುರದ ಸಂಗಮೇಶ್(50) ಮೃತರು. ಕಾರು ಚಾಲಕನನ್ನು ಜಿಗಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಗಣಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂಗಮೇಶ್ ಹರಪನಹಳ್ಳಿಯ ಕ್ಲಾಸಿಕ್ ಬಡಾವಣೆಯಲ್ಲಿ ವಾಸವಾಗಿದ್ದರು. ಬುಧವಾರ ಎಂದಿನಂತೆ ಕಂಪನಿಗೆ ತೆರಳುವ ಸಮಯದಲ್ಲಿ ಕಾರು ಏಕಾಏಕಿ ಡಿಕ್ಕಿ ಹೊಡೆದಿದ್ದರಿಂದ ಸಂಗಮೇಶ್ ತಲೆಯ ಭಾಗಕ್ಕೆ ಗಾಯವಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.