ADVERTISEMENT

ಫೆ.27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 2:10 IST
Last Updated 26 ಫೆಬ್ರುವರಿ 2026, 2:10 IST
   

ದೊಡ್ಡಬಳ್ಳಾಪುರ: ನಗರದ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 27 ರಂದು ‘ಉದ್ಯೋಗಮೇಳ’ ಆಯೋಜಿಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಆನ್‌ಲೈನ್‌ ಮೂಲಕ ನೋಂದಾಯಿಸಿಕೊಳ್ಳಬೇಕು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ತಾಲ್ಲೂಕು ಆಡಳಿತ, ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ. ಉದ್ಯೋಗಮೇಳದಲ್ಲಿ ಸುಮಾರು 100ಕ್ಕೂ ಹೆಚ್ಚು ನಿಯೋಜಕರು, ಕಂಪನಿಗಳು ಭಾಗವಹಿಸಿ ಖಾಲಿ ಇರುವ 3000ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು https://bangalorerural.nic.in ಬಳಸಿಕೊಂಡು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳದ ದಿನದಂದು ಸಹ ಅಭ್ಯರ್ಥಿಗಳ ನೋಂದಣಿ ಕೌಂಟರ್‌ಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಹುದು.

ADVERTISEMENT

10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ.