ADVERTISEMENT

ಸಹಕಾರ ಸಂಘದ ಅಭಿವೃದ್ಧಿಗೆ ಕೈಜೋಡಿಸಿ: ಶಾಸಕ ಶರತ್ ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2020, 14:15 IST
Last Updated 1 ಫೆಬ್ರುವರಿ 2020, 14:15 IST
ಸೂಲಿಬೆಲೆ ಸಹಕಾರ ಬ್ಯಾಂಕಿನ ನೂತನ ಕಟ್ಟಡ ಹಾಗೂ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿ ಪೂಜೆ ಮಾಡಿದರು
ಸೂಲಿಬೆಲೆ ಸಹಕಾರ ಬ್ಯಾಂಕಿನ ನೂತನ ಕಟ್ಟಡ ಹಾಗೂ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿ ಪೂಜೆ ಮಾಡಿದರು   

ಸೂಲಿಬೆಲೆ: ಸಹಕಾರ ಸಂಘ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡದೆ ಅದರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ದುಡಿಯಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಸೂಲಿಬೆಲೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಬ್ಯಾಂಕಿನ ನೂತನ ಕಟ್ಟಡ ಹಾಗೂ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.

ಸಹಕಾರ ಸಂಘ ಸಂಸ್ಥೆಗಳು ಸ್ಥಳೀಯ ಆಡಳಿತ ಯಂತ್ರಗಳಾಗಿದ್ದು, ರೈತ ವರ್ಗದ ಶ್ರೇಯಸ್ಸಿಗೆ ನಿರಂತರ ಸೇವೆ ಒದಗಿಸುವ ಕೇಂದ್ರಗಳಾಗಬೇಕು ಎಂದರು.

ADVERTISEMENT

ಬ್ಯಾಂಕಿನ ಅಧ್ಯಕ್ಷ ಬಿ.ವಿ.ಸತೀಶ ಗೌಡ ಮಾತನಾಡಿ, ಸಹಕಾರ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದಲ್ಲಿ ರೈತರಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ. ಕೃಷಿ ಅವಲಂಬಿತರಿಗೆ ಸಾಲ ಸೌಲಭ್ಯಗಳನ್ನು ಸರ್ಕಾರದ ಆದೇಶದಂತೆ ಕಡಿಮೆ ಬಡ್ಡಿ ದರದಲ್ಲಿ ನೀಡುತ್ತಿದ್ದೇವೆ. ಅಲ್ಲದೆ ನ್ಯಾಯಬೆಲೆ ಅಂಗಡಿ, ರಸಗೊಬ್ಬರ ಒದಗಿಸುವ ಮೂಲಕ ಸೇವೆ ನೀಡಲಾಗುತ್ತಿದೆ ಎಂದರು.

ತಾಲ್ಲೂಕು ಟಿಎಪಿಸಿಎಂಎಸ್ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ, ಬಿ.ಎಂ.ನಾರಾಯಣಸ್ವಾಮಿ, ಯುವ ಮುಖಂಡ ಬಿ.ಜಿ.ನಾರಾಯಣಗೌಡ, ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಮುನಿಯಪ್ಪ, ನಿರ್ದೇಶಕರಾದ ಬಿ.ತಮ್ಮೇಗೌಡ, ಪ್ಯಾರುಸಾಬಿ, ನಂಜಮ್ಮ, ವಿಜಯಲಕ್ಷ್ಮೀ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಜನಾರ್ಧನ ರೆಡ್ಡಿ, ಅಕ್ಬರ್ ಅಲಿ ಖಾನ್(ಬಾಜಿ), ಸೈಯದ್ ಮಹಬೂಬ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.