ADVERTISEMENT

ಕಲ್ಯಾಣಿ, ಕೆರೆಗಳ ಪುನಶ್ಚೇತನ ಅಗತ್ಯ: ಸಚಿವ ಕೃಷ್ಣಬೈರೇಗೌಡ

​ಪ್ರಜಾವಾಣಿ ವಾರ್ತೆ
Published 11 ಜೂನ್ 2019, 7:28 IST
Last Updated 11 ಜೂನ್ 2019, 7:28 IST
   

ದೊಡ್ಡಬಳ್ಳಾಪುರ: ನೀರಿನ ಮಹತ್ವವನ್ನು ಜನ ಅರ್ಥಮಾಡಿಕೊಂಡು ಪ್ರತಿ ಮಳೆ ಹನಿ ನೀರನ್ನು ಹಿಡಿದಿಟ್ಟುಕೊಳ್ಳುವ ಕೆಡೆಗೆ ಪ್ರಥಮ ಅಧ್ಯತೆ ನೀಡುವ ತುರ್ತ ಅಗತ್ಯವಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಅವರು ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಸ್ವಚ್ಛ ಮೇವ ಜಯತೆ ಮತ್ತು ಜಲಾಮೃತ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕೆರೆ, ಕಲ್ಯಾಣಿಗಳ ಪುನಶ್ಚೇತನದ ಕಡೆಗೆ ಮುಂದಾಗಬೇಕು. ಜಲಾಮೃತ ಯೋಜನೆಯಲ್ಲಿ ಶಾಶ್ವತ ಯೋಜನೆಯಾಗಿ 20 ಸಾವಿರ ಚಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ. ಇವುಗಳ ಕಾಮಗಾರಿ ಮುಂದಿನ ಮಾರ್ಚ್ 30 ಕ್ಕೆ ಮುಕ್ತಾಯಗೊಳಿಸಲು ಗುರಿ ನಿಗದಿಗೊಳಿಸಲಾಗಿದೆ ಎಂದರು.

ಮಂಗಳವಾರ ಒಂದೇ ದಿನ ರಾಜ್ಯದಲ್ಲಿ ಮೂವತ್ತು ಲಕ್ಷ ಸಸಿ ನಡೆಲಾಗುತ್ತಿದೆ. ರಾಜ್ಯದಲ್ಲಿ ಈ ವರ್ಷ ಎರಡು ಕೋಟಿ ಸಸಿಗಳನ್ನು ನೆಡಲಾಗುತ್ತಿದೆ, ನೀರು ಉಳಿಸದಿದ್ದರೆ ನಮ್ಮ ಮಕ್ಕಳಿಗೆ ದ್ರೋಹ ಮಾಡಿದಂತೆ ಎಂದರು.

ADVERTISEMENT

ಗ್ರಾಮಾಂತರ ಜಿಲ್ಲೆಯಲ್ಲಿ ಜನರ, ಉದ್ಯಮಿಗಳ ಸಹ ಭಾಗಿತ್ವದಲ್ಲಿ ಜಿಲ್ಲಾಧಿಕಾರಿ ಕರೀಗೌಡ ಅವರು 30 ಕೆರೆಗಳ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್, ಶಾಸಕ ಟಿ.ವೆಂಕಟರಮಣಯ್ಯ, ಗ್ರಾಮೀಣ ಅಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತಿಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.