ADVERTISEMENT

ಕನಕಪುರ: ಅನುಷ್ಠಾನಗೊಂಡ ಕಾಮಗಾರಿಗಳಲ್ಲಿ ಲೋಪ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 6:10 IST
Last Updated 5 ಆಗಸ್ಟ್ 2024, 6:10 IST
ಕನಕಪುರ ಚೂಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಮಾತನಾಡಿದರು
ಕನಕಪುರ ಚೂಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಮಾತನಾಡಿದರು   

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಚೂಡಹಳ್ಳಿ ಗ್ರಾಮ ಪಂಚಾಯಿತಿಯ 2024-25 ಸಾಲಿನ ಸಾಮಾಜಿಕ ಪರಿಶೋಧನ ಗ್ರಾಮ ಸಭೆಯು ಶನಿವಾರ ನಡೆಯಿತು.

ಕನಕಪುರ ತಾಲ್ಲೂಕು ಸಿಡಿಪಿಓ ನಾರಾಯಣ್ ಪಂಚಾಯಿತಿ ನೋಡಲ್ ಅಧಿಕಾರಿಯಾಗಿ ಗ್ರಾಮ ಸಭೆ ನಡೆಸಿಕೊಟ್ಟರು.

ಸಾಮಾಜಿಕ ಪರಿಶೋಧನೆಯ ಜಿಲ್ಲಾ ಸಂಯೋಜಕ ಶ್ರೀನಿವಾಸ ಲೆಕ್ಕಪರಿಶೋಧನಾ ವರದಿ ಮಂಡಿಸಿ ಪಂಚಾಯತಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಪರಿಶೋಧನಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು.

ADVERTISEMENT

ಅನುಷ್ಠಾನಗೊಂಡಿರುವ ಕಾಮಗಾರಿಗಳಲ್ಲಿ ಕೆಲವು ಲೋಪದೋಷಗಳಾಗಿದ್ದು, ಕೆಲವು ಕಾಮಗಾರಿಗಳನ್ನು ಅನುಷ್ಠಾನಗೊಂಡ ಮೇಲೆ ನಾಶ ಮಾಡಿರುವುದು ಕಂಡು ಬಂದಿದೆ ಅವುಗಳನ್ನು ಸರಿಪಡಿಸಿಕೊಳ್ಳಬೇಕೆಂದು ತಿಳಿಸಿದರು.

15ನೇ ಹಣಕಾಸು ಯೋಜನೆಯಲ್ಲಿ ಚರಂಡಿ ಸ್ವಚ್ಛತೆಗೆ ಹಣ ಬಳಸುವಂತಿಲ್ಲ. ಆದರೂ ಹಣ ಪಾವತಿ ಮಾಡಿದ್ದಾರೆ. ಕಾಮಗಾರಿಗಳಲ್ಲಿ ಆಗಿರುವ ಲೋಪ ದೋಷಗಳನ್ನು ನಿಗದಿತ ಕಾಲಾವಧಿಯಲ್ಲಿ ಸರಿಪಡಿಸುವಂತೆ ಸೂಚನೆ ನೀಡಿದರು.

ಗ್ರಾಮಸ್ಥರಾದ ಚಿಕ್ಕಸಿದ್ದೇಗೌಡ, ರಾಮಲಿಂಗೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ್, ಬಾಬು ಮಾತನಾಡಿ, ಕೆಲವು ವೈಯಕ್ತಿಕ ಕಾಮಗಾರಿಗಳಲ್ಲಿ ಒಂದೂವರೆ ವರ್ಷದಿಂದ ಹಣ ಬಿಡುಗಡೆಯಾಗಿಲ್ಲ. ಬಾಕಿ ಇರುವ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಉತ್ತಾಯಿಸಿದರು.

ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿವೆ. ಪಂಚಾಯತಿಯಿಂದ ಚರಂಡಿಗಳಲ್ಲಿನ ಹೂಳು ತೆಗೆಸಿ ನೀರು ನಿಲ್ಲದಂತೆ ಮಾಡಬೇಕು, ಸೊಳ್ಳೆಗಳ ನಾಶಕ್ಕೆ ಔಷಧಿ ಸಿಂಪಡಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಪಿಡಿಒ ರಮೇಶ್ ಮಾತನಾಡಿ, ಪಂಚಾಯಿತಿ ವತಿಯಿಂದ ಅನುಷ್ಠಾನ ಗೊಂಡಿರುವ ಕಾಮಗಾರಿಗಳಲ್ಲಿ ಸಣ್ಣಪುಟ್ಟ ಲೋಪ ದೋಷಗಳು ಆಗಿರುವುದಾಗಿ ಲೆಕ್ಕಪರಿಶೋಧಕರು ತಿಳಿಸಿದ್ದಾರೆ. ಅವುಗಳನ್ನು ಪರಿಶೀಲಿಸಿ, ಸರಿಪಡಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮು, ಉಪಾಧ್ಯಕ್ಷೆ ಸವಿತಾ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.