ADVERTISEMENT

ಆನೇಕಲ್: ಹೆನ್ನಾಗರದಲ್ಲಿ ರಾಜ್ಯೋತ್ಸವ ಓಟ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 5:36 IST
Last Updated 6 ಜನವರಿ 2026, 5:36 IST
ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯೋತ್ಸವದ ಪ್ರಯುಕ್ತ 5 ಕಿ.ಮೀ ಮ್ಯಾರಥಾನ್ ಓಟಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಕೇಶವರೆಡ್ಡಿ ಚಾಲನೆ ನೀಡಿದರು
ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯೋತ್ಸವದ ಪ್ರಯುಕ್ತ 5 ಕಿ.ಮೀ ಮ್ಯಾರಥಾನ್ ಓಟಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಕೇಶವರೆಡ್ಡಿ ಚಾಲನೆ ನೀಡಿದರು   

ಆನೇಕಲ್: ಕರ್ನಾಟಕ ರಕ್ಷಣಾ ವೇದಿಕೆಯಿಂದ ತಾಲೂಕಿನ ಹೆನ್ನಾಗರದಲ್ಲಿ ರಾಜ್ಯೋತ್ಸವ ಪ್ರಯುಕ್ತ 5 ಕಿ.ಮೀ ಮ್ಯಾರಥಾನ್ ನಡೆಯಿತು. 

ಕನ್ನಡ ನಾಡು ನುಡಿ ಉಳಿಸುವ ಜಾಗೃತಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅನ್ಯ ಭಾಷೆಗಳ ಪ್ರಭಾವದಿಂದಾಗಿ ಇತ್ತೀಚಿನ ದಿನಗಳಲ್ಲಿ ಕನ್ನಡ ಕಡಿಮೆಯಾಗುತ್ತಿದೆ. ಹಾಗಾಗಿ ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ಪ್ರತಿಯೊಬ್ಬರು ಶ್ರಮವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಕೇಶವರೆಡ್ಡಿ ಹೇಳಿದರು.

ಆನೇಕಲ್ ತಾಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿದ್ದು ಕೈಗಾರಿಕೆಗಳಲ್ಲಿ ಹೆಚ್ಚು ಅನ್ಯಭಾಷಿಕರಿದ್ದಾರೆ. ಅವರಿಗೆ ಕನ್ನಡದ ಜಾಗೃತಿ ಮೂಡಿಸಬೇಕು. ಯುವ ಸಮುದಾಯಕ್ಕೆ ಕನ್ನಡ ತಲುಪಿಸಬೇಕೆಂದು ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಹೆನ್ನಾಗರ ಘಟಕದ ಅಧ್ಯಕ್ಷ ನಾಗರಾಜು ತಿಳಿಸಿದರು.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆಯ ಲೋಕೇಶ್ ರೆಡ್ಡಿ, ಮೋಹನ್, ಶೇಖರ್, ಅಶೋಕ್, ಕುಮಾರ್, ಮುನಿರಾಜು, ಮಣಿ, ಅರುಣ್, ಗಿರೀಶ್, ಪ್ರಕಾಶ್, ಕಿರಣ್, ಮಧು, ಪ್ರಭು, ಮಂಜುನಾಥ್, ಶ್ರೀನಿವಾಸ್, ಅರುಣ್, ಹಿತೇಂದ್ರ, ರಾಮು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.