ಹೊಸಕೋಟೆ: ಕರ್ನಾಟಕದಲ್ಲಿ ಕನ್ನಡವಷ್ಟೇ ಸಾರ್ವಭೌಮ. ನಮ್ಮಲ್ಲಿ ಜಾತಿ, ಮತ, ಪಂಥಗಳನ್ನು ಮೀರಿ ಒಗ್ಗೂಡಿಸುವ ಶಕ್ತಿ ನಮ್ಮ ಭಾಷೆಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಚ್.ಎಂ.ಮುನಿರಾಜು ಹೇಳಿದರು.
ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಭಾಷಾಭಿಮಾನ ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗುತ್ತಿದ್ದು, ಭಾಷೆ ಹಿನ್ನಡೆಯಾಗುತ್ತಿದೆ. ಭಾಷೆ ಪ್ರೇಮ ಒಂದು ತಿಂಗಳಿಗೆ ಸೀಮಿತವಾಗದೆ ನಿತ್ಯ ನಿರಂತರವಾಗಬೇಕು. ಯಾವುದೇ ಭಾಷೆ ಇರಲಿ ಕನ್ನಡವೇ ಆದ್ಯತೆಯಾಗಬೇಕು ಎಂದರು.
ಮಾಜಿ ಅಧ್ಯಕ್ಷ ಟಿ.ನಾಗರಾಜ್, ಕರ್ನಾಟಕ ಕಾರ್ಯ ನಿರ್ವಹಾಕ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಚ್.ಕೆ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಮಾಕನಹಳ್ಳಿ ಮಂಜುನಾಥ್, ನಂದಗುಡಿ ಹೋಬಳಿ ಅಧ್ಯಕ್ಷ ಹರೀಶ್, ಸಂಘಟನಾ ಕಾರ್ಯದರ್ಶಿ ಬಚ್ಚೇಗೌಡ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್, ಶಾಲಾ ಮುಖ್ಯ ಶಿಕ್ಷಕರಾದ ಗುಲ್ಬದಂ ತಾರಾ, ಸಹಶಿಕ್ಷಕರಾದ ವೀಣಾ, ಶಿಲ್ಪ, ಚೈತ್ರ, ವಿಜಯಕುಮಾರ್ ಹಾಜರಿದ್ದರು.
ಕಸಾಪದಿಂದ 45 ವರ್ಷಗಳಿಂದ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಗುತ್ತಿದೆ-ಎಚ್.ಎಂ.ಮುನಿರಾಜು, ತಾಲ್ಲೂಕು ಅಧ್ಯಕ್ಷ ಕಸಾಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.