ADVERTISEMENT

ಹೊಸಕೋಟೆ| ಕರಗಕ್ಕೆ ಸರ್ಕಾರ ಅನುದಾನ ನೀಡಿದರೂ ಬಿಡುಗಡೆ ಮಾಡದ ಇಲಾಖೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನ್ಯಾಯ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 4:38 IST
Last Updated 9 ಫೆಬ್ರುವರಿ 2026, 4:38 IST
ಜಯರಾಜ್
ಜಯರಾಜ್   

ಹೊಸಕೋಟೆ: ಪ್ರತಿ ವರ್ಷ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ಭಾಗದಲ್ಲಿ ದ್ರೌಪತಿ ದೇವಿ ಕರಗ ಮಹೋತ್ಸವಗಳು ನಡೆಯುತ್ತವೆ. ಹೀಗಾಗಿ ಕರಗ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಆಯವ್ಯಯದಲ್ಲಿ ಜಿಲ್ಲೆಗೆ ₹3 ಕೋಟಿ ಅನುದಾನ ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಅನುದಾನ ಬಿಡಿಗಡೆ ಮಾಡಿಲ್ಲ ಎಂದು ರಾಜ್ಯ ವಹ್ನೀಕುಲ ತಿಗಳ ಸಂಘದ ಮಾಜಿ ಅಧ್ಯಕ್ಷ ಸಿ.ಜಯರಾಜ್ ಆರೋಪಿಸಿದರು.

ಕಳೆದ ವರ್ಷದ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿ ಮತ್ತು ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಶೀಘ್ರ ಅನುದಾನ ಬಿಡುಗಡೆ ಮಾಡಿವ ಆಶ್ವಾಸನೆ ನೀಡಿದ್ದರು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ಆಯುಕ್ತರ ಮಾತಿಗೂ ಕಿಮ್ಮತ್ತು ನೀಡದೆ ಮೊಂಡುತನ ಪ್ರದರ್ಶಿಸುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದೆ ಸರ್ಕಾರದ ಅನುದಾನ ಪಡೆಯದೇ ದಾನಿಗಳಿಂದ ಹಣ ಸಂಗ್ರಹಿಸಿ ದ್ರೌಪತಿ ದೇವಿ ಕರಗ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತಿತ್ತು. ಆದರೆ ಸರ್ಕಾರವೇ ಪ್ರತಿ ವರ್ಷ ಅನುದಾನ ನೀಡುವುದಾಗಿ ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡಿತ್ತು. ಆದರೆ ಇದುವರೆಗೆ ಅನುದಾನ ಬಿಡುಗಡೆಯಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಈ ಕೂಡಲೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅನುದಾನ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚೆರಿಕೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.