ADVERTISEMENT

ನೆರೆ ಸಂತ್ರಸ್ತರಿಗೆ ನೆರವಾದ ಶಾಸಕ ಟಿ.ವೆಂಕಟರಮಣಯ್ಯ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2019, 20:07 IST
Last Updated 11 ಆಗಸ್ಟ್ 2019, 20:07 IST
ಶಾಸಕ ಟಿ.ವೆಂಕಟರಮಣಯ್ಯ ಅವರ ನೇತೃತ್ವದಲ್ಲಿ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಲಾಯಿತು
ಶಾಸಕ ಟಿ.ವೆಂಕಟರಮಣಯ್ಯ ಅವರ ನೇತೃತ್ವದಲ್ಲಿ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಲಾಯಿತು   

ದೊಡ್ಡಬಳ್ಳಾಪುರ: ‘ನೆರೆ ಸಂತ್ರಸ್ತರ ನೆರವಿಗೆ ಸ್ಪಂದಿಸುವ ಸಲುವಾಗಿ ಒಂದು ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಭಾನುವಾರ ನಗರದಲ್ಲಿ ಪಾದಯಾತ್ರೆ ನಡೆಸುವ ಮೂಲಕ ನೆರೆ ಸಂತ್ರಸ್ತರ ನೆರವಿಗಾಗಿ ದೇಣಿಗೆ ಹಾಗೂ ವಸ್ತು
ಗಳನ್ನುಅವರು ಸಂಗ್ರಹಿಸಿದರು.

ನಗರದ ತರಕಾರಿ ಮಾರುಕಟ್ಟೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ.ತಾಲ್ಲೂಕಿನಲ್ಲಿ ಸಂಗ್ರಹವಾಗಿರುವ ವಸ್ತುಗಳನ್ನು ಆ 17 ರಂದು ಸಂಜೆ ನಗರದಿಂದ ಕ್ಯಾಂಟರ್‌ ವಾಹನದ ಮೂಲಕ ಉತ್ತರ ಕರ್ನಾಟಕದ ಮಳೆ ಹಾನಿ ಪ್ರದೇಶಗಳಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.