ADVERTISEMENT

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿ: ಕೆ.ಎಚ್‌. ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 4:57 IST
Last Updated 26 ನವೆಂಬರ್ 2025, 4:57 IST
ಕೆ.ಎಚ್‌. ಮುನಿಯಪ್ಪ
ಕೆ.ಎಚ್‌. ಮುನಿಯಪ್ಪ   

ದೊಡ್ಡಬಳ್ಳಾಪುರ: ‘ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರೆ ಮುಂದುವರೆಯಲಿ. ಇಲ್ಲಿ ಅಧಿಕಾರ ಬಿಟ್ಟು ಕೊಡುವ ಪ್ರಶ್ನೆ ಬಂದಿಲ್ಲ’ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಮಂಗಳವಾರ ತಾಲ್ಲೂಕಿನ ಘಾಟಿಯಲ್ಲಿ  ‘ತಾವು ಮುಖ್ಯಮಂತ್ರಿ ಆಕಾಂಕ್ಷಿಗಳ ರೇಸ್‌ನಲ್ಲಿ ಇದ್ದೀರಿ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಎಂ ಖುರ್ಚಿ ಸದ್ಯಕ್ಕೆ ಖಾಲಿ ಇಲ್ಲ, ಸಿಎಂ ರೇಸ್‌ನಲ್ಲೂ ನಾನು ಇಲ್ಲ’ ಎಂದು ಹೇಳಿದರು.

ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾಣೆ ಸೇರಿದಂತೆ ಯಾವುದೇ ಬದಲಾವಣೆ ವಿಚಾರ ಚರ್ಚೆಯಲ್ಲಿ ಇಲ್ಲ. ಇದೆಲ್ಲವೂ ಹೈಕಮಾಂಡ್‌ಗೆ ಬಿಟ್ಟಿದ್ದು, ಹೈಕಮಾಂಡ್ ಕೈಗೊಳ್ಳುವ ತೀರ್ಮಾಕ್ಕೆ ಎಲ್ಲರು ಬದ್ದರಾಗಿದ್ದೇವೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.