
ದೇವನಹಳ್ಳಿ: ಈ ಬಾರಿಯ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಹೊಸಕೋಟೆ ನಗರದ ಬಿ.ಸಿ. ಶ್ರೀನಿವಾಸಯ್ಯ, ಕನ್ನಡ ಪರ ಸೇವೆಗಾಗಿ ನೆಲಮಂಗಲ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಉಮೇಶ್ ಗೌಡ.ಜಿ, ಕೃಷಿ ಕ್ಷೇತ್ರದಲ್ಲಿ ದೇವನಹಳ್ಳಿಯ ವಿಜಯಪುರ ಹೋಬಳಿಯ ಬೀಡಗಾನಹಳ್ಳಿ ಗ್ರಾಮದ ಬಿ.ಆರ್. ಮಂಜುನಾಥ್, ತೋಟಗಾರಿಕೆ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಹಳ್ಳಿ ರೈತ ಅಂಬರೀಶ್ ಅವರನ್ನು ಆಯ್ಕೆ ಮಾಡಲಾಗಿದೆ.
ಪಟ್ಟಣದ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ವಿತರಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.