
ವಿಜಯಪುರ (ದೇವನಹಳ್ಳಿ): ಪಟ್ಟಣದ ಗುರುಪ್ಪನಮಠದ ಓಂಕಾರೇಶ್ವರ ವೃತ್ತದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವ ನಡೆಯಿತು.
ತಾಯಿ ಭುವನೇಶ್ವರಿ, ಓಂಕಾರೇಶ್ವರಸ್ವಾಮಿ ದೇವರ ಭಾವಚಿತ್ರಕ್ಕೆ ಹಾಗೂ ನಾಮಫಲಕಕ್ಕೆ ಪೂಜೆ ಸಲ್ಲಿಸಿ ಬಳಿಕ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು.
ಕನ್ನಡ ರಾಜ್ಯೋತ್ಸವವು ಕೇವಲ ಒಂದು ದಿನ ಆಚರಣೆಗಷ್ಟೇ ಸೀಮಿತವಾಗಬಾರದು. ಕನ್ನಡ ನಾಡು, ನುಡಿ, ಕಲೆ ಹಾಗೂ ಸಂಸ್ಕೃತಿಗೆ ಕೊಡುಗೆ ನೀಡಿದವರನ್ನು ಸ್ಮರಿಸುವ ಜತೆಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು ಎಂದು ಪುರಸಭೆ ಸದಸ್ಯ ಬೈರೇಗೌಡ ತಿಳಿಸಿದರು.
ಪ್ರತಿಯೊಬ್ಬರು ಮಾತೃಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ನಮ್ಮ ಸಾಹಿತ್ಯ, ಕಲೆ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಶ್ರೀನೀಲಗಿರೀಶ್ವರ ವಿದ್ಯಾನಿಕೇತನ ಟ್ರಸ್ಟ್ ಅಧ್ಯಕ್ಷ ವೀರಣ್ಣ ಹೇಳಿದರು.
ಪುರಸಭೆ ಸದಸ್ಯರಾದ ನಾರಾಯಣಸ್ವಾಮಿ, ರವಿ, ಓಂಕಾರೇಶ್ವರ ಟ್ರಸ್ಟ್ ಅಧ್ಯಕ್ಷ ವಿ.ಎಂ.ನಾಗರಾಜ್, ರಾಮಚಂದ್ರಪ್ಪ, ರಮೇಶ್, ಮಹೇಶ್, ಮಂಜುನಾಥ್, ನವೀನ್, ಅನಿಲ್, ಹರೀಶ್, ಕಿರಣ್, ರಾಜಕುಮಾರ್, ಪ್ರಭಾಕರ್, ಹರೀಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.