
ಸಪ್ತಮಾತೃಕಾ ಮಾರಿಯಮ್ಮದೇವಿಗೆ ಅಲಂಕಾರ
ದೊಡ್ಡಬಳ್ಳಾಪುರ: ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ ಲಕ್ಷ ದೀಪೋತ್ಸವ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಸಂಜೆ ಸಂಭ್ರಮದಿಂದ ನಡೆದವು.
ಸಪ್ತಮಾತೃಕಾ ಮಾರಿಯಮ್ಮ ದೇವಾಲಯ, ತೂಬಗೆರೆ ಪೇಟೆಯ ಗಣಪತಿ ದೇವಾಲಯದಲ್ಲಿ ವಿನಾಯಕ ಭಕ್ತ ಮಂಡಲಿಯಿಂದ ಲಕ್ಷ ದೀಪೋತ್ಸವ, ತೇರಿನ ಬೀದಿಯ ರಂಗಪ್ಪ ವೃತ್ತದ ಸರ್ವಶಕ್ತಿ ಮಾರಿಯಮ್ಮ ದೇವಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ, ಶ್ರೀವೈಕುಂಠ ಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು.
ದೊಡ್ಡಬಳ್ಳಾಪುರದ ಸಪ್ತಮಾತೃಕಾ ಮಾರಿಯಮ್ಮ ದೇವಾಲಯದಲ್ಲಿ ಕಾರ್ತಿಕ ಅಮಾವಾಸ್ಯೆಯ ಅಂಗವಾಗಿ ಲಕ್ಷದೀಪೋತ್ಸವ
ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಅಮಾವಾಸ್ಯೆ ಅಂಗವಾಗಿ ಸ್ವಾಮಿಗೆ ಹರಳು ಅಲಂಕಾರ ಮಾಡಲಾಗಿತ್ತು. ಕರೇನಹಳ್ಳಿಯಲ್ಲಿರುವ ಅಭಯಚೌಡೇಶ್ವರಿದೇವಿ ದೇವಾಲಯದಲ್ಲಿ ಲಕ್ಷದೀಪೋತ್ಸವ ನಡೆಯಿತು.
ಘಾಟಿ ಕ್ಷೇತ್ರದಲ್ಲಿ ವಿಶೇಷ: ತಾಲ್ಲೂಕಿನ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಅಮಾವಾಸ್ಯೆ ಅಂಗವಾಗಿ ಲಕ್ಷ ದೀಪೋತ್ಸವ ನಡೆಯಿತು. ದೇವಾಲಯದಲ್ಲಿ ವಿಶೇಷ ಅಲಂಕಾರ, ದೇವರ ಉತ್ಸವ ನಡೆಸಲಾಯಿತು. ನೂರಾರು ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ದೀಪೋತ್ಸವದಲ್ಲಿ ಭಾಗವಹಿಸಿದ್ದ ದೃಶ್ಯ ಸಾಮಾನ್ಯವಾಗಿತ್ತು.
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ ನಡೆಯಿತು
ದೊಡ್ಡಬಳ್ಳಾಪುರದ ಅಭಯಚೌಡೇಶ್ವರಿ ದೇವಾಲಯದಲ್ಲಿ ಲಕ್ಷದೀಪೋತ್ಸವ ಹಾಗೂ ಹೂವಿನ ಅಲಂಕಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.