ADVERTISEMENT

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ 3 ಕೆ.ಜಿ ಹೈಡ್ರೊ ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 4:59 IST
Last Updated 7 ಫೆಬ್ರುವರಿ 2026, 4:59 IST
<div class="paragraphs"><p> ಹೈಡ್ರೊ ಗಾಂಜಾ (ಪ್ರಾತಿನಿಧಿಕ ಚಿತ್ರ)</p></div>

ಹೈಡ್ರೊ ಗಾಂಜಾ (ಪ್ರಾತಿನಿಧಿಕ ಚಿತ್ರ)

   

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥಾಯ್ಲೆಂಡ್‌ನ ಫುಕೆಟ್‌ನಿಂದ ಬಂದಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಡಿಆರ್‌ಐ ಹಾಗೂ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ 4ರ ತಡರಾತ್ರಿ ಆರೋಪಿಗಳು ತಂದಿದ್ದ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 3.03 ಕೆ.ಜಿ ಹೈಡ್ರೊ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಾದಕ ವಸ್ತುವಿನ ಮೌಲ್ಯವು ಸುಮಾರು ₹1.06 ಕೋಟಿ ಎಂದು ಅಂದಾಜಿಸಲಾಗಿದೆ.

ADVERTISEMENT

ಈ ಸಂಬಂಧ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.